ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ನೀರಕಟ್ಟೆಯ ತಿರುವಿನಲ್ಲಿ ಚಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಪ್ರಯಾಣಿಕ ಬಸ್ ನಡಿ ಸಿಲುಕಿ ಸಾವನ್ನಪ್ಪಿದ್ದಾನೆ.
ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.