HomeLive Newsಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಓರ್ವ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಓರ್ವ ಸ್ಥಳದಲ್ಲೇ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್ ನೀರಕಟ್ಟೆಯ ತಿರುವಿನಲ್ಲಿ ಚಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಓರ್ವ ಪ್ರಯಾಣಿಕ ಬಸ್ ನಡಿ ಸಿಲುಕಿ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular