HomeKarnatakaBIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಕಮಲಮ್ಮ (42) ಹಾಗೂ ಮಗಳು ವೀಣಾ (16) ಮೃತ ದುರ್ದೈವಿಗಳು. ಬೆಳಿಗ್ಗೆ ಮಗಳನ್ನು ಶಾಲೆಗೆ ಬಿಡಲೆಂದು ಕಮಲಮ್ಮ ಮಗಳನ್ನು ಕರೆದೊಯ್ಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ತಾಯಿ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಿಪಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular