ಚಿಕ್ಕಮಗಳೂರು: ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು, 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಶೃಂಗೇರಿ ಬಳಿಯ ಕಾವಡಿ ಬಳಿ ಬಸ್ ಪಲ್ಟಿಯಾಗಿ ಬಿದ್ದಿದೆ. 11 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಐಅವರು ವಿದ್ಯಾರ್ಥಿಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಬಸ್ ನಲ್ಲಿ ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
