ತುಮಕೂರು: ಹಬ್ಬಕ್ಕೆಂದು ಮಗಳ ಮನೆಗೆ ಬಂದಿದ್ದ ಮಹಿಳೆ ವಾಪಸ್ ಊರಿಗೆ ಹೋಗುತ್ತಿದ್ದಾಗ ಬಸ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾರಗೊಂಡನಹಳ್ಳಿಯಲ್ಲಿ ನಡೆದಿದೆ.
ಕಾಮಕ್ಕ (64) ಮೃತ ಮಹಿಳೆ. ಗುಡ್ಡದ ಜೋಗಿಹಳ್ಳಿ ಗ್ರಾಮದ ಕಾಮಕ್ಕ ಬಸ್ ಇಳಿಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಬಸ್ ನ ಹಿಂಬದಿ ಚಕ್ರ ಹರಿದು ಹೋಗಿದೆ.
ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಕಾಮಕ್ಕ ಸಾವನ್ನಪ್ಪಿದ್ದಾರೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.