HomeLatest NewsBIG NEWS: ಬಡೇಕೊಳ್ಳ ಘಾಟ್ ನಲ್ಲಿ ಬಸ್ ಪಲ್ಟಿ: ಮಹಿಳೆ ಸೇರಿ ಇಬ್ಬರು ಸಾವು; 12...

BIG NEWS: ಬಡೇಕೊಳ್ಳ ಘಾಟ್ ನಲ್ಲಿ ಬಸ್ ಪಲ್ಟಿ: ಮಹಿಳೆ ಸೇರಿ ಇಬ್ಬರು ಸಾವು; 12 ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಡೇಕೊಳ್ಳ ಘಾಟ್ ನಲ್ಲಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ನಡೆದಿದೆ.

ಅಪಘಾತದಲ್ಲಿ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಗೋಗಟೆ ಸಂಸ್ಥೆಗೆ ಸೇರಿದ ಬಸ್ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular