ಬಸ್ ನಲ್ಲಿ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿ ವಶ: ಇಬ್ಬರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಬಸ್ ನಲ್ಲಿ ತಮಿಳುನಾಡು ಕಡೆಗೆ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಮೂರುವರೆ ಕೆಜಿ ಅಂಬರ್ ಗ್ರೀಸ್ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಶಮಿ ಅಹಮದ್(45), ಕೋಡಿ ಕ್ಯಾಂಪ್ ನಿವಾಸಿ ಫೈರೋಜ್ ಖಾನ್(38) ಬಂಧಿತ ಆರೋಪಿಗಳು.

ತಮಿಳುನಾಡು ಬಸ್ ನಲ್ಲಿ ಶನಿವಾರ ರಾತ್ರಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಂಚಾರಿ ದಳ ಪೊಲೀಸರು ಆರೋಪಿಗಳನ್ನು ಬಂಧಿಸಿ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read