ಚಿಕ್ಕಬಳ್ಳಾಪುರ: ವಿದ್ಯುತ್ ಕಂಬ ಹಾಗೂ ಕಾಂಪೌಂಡ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಡುರಸ್ತೆಯಲ್ಲಿಯೇ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಹತ್ತಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಬಳಿಕ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು, ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳದಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಹಳೇ ಬೈಕ್ ಗಳು ಕೂಡ ಬೆಂಕಿಗಾಹುತಿಯಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಬಸ್ಮವಾಗಿದೆ. ಸಮೀಪವೇ ಪೆಟ್ರೋಲ್ ಬಂಕ್ ಕೂಡ ಇತ್ತು. ಅದೃಷ್ಟವಶಾತ್ ಪೆಟ್ರೋಲ್ ಬಂಕ್ ನತ್ತ ಬೆಂಕಿ ವ್ಯಾಪಿಸಿಲ್ಲ.