HomeKarnatakaBIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ ನಡೆದುದೆ.

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ಇರಕಸಂದ್ರದಿಂದ ಕೋಳಾಲ ಕಡೆಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular