ಮಂಗಳೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಪುತ್ತೂರಿನ ಮುರದಲ್ಲಿ ಈ ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್, ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಕಾರಿನಲ್ಲಿದ್ದ ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.