ತೆಲಂಗಾಣದ ಜೋಗುಲಾಂಬಾ ಗಡ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಬೆಂಕಿ ಹತ್ತಿಕೊಂಡು ಓರ್ವ ಮಹಿಳಾ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಜಗನ್ ಅಮೆಜಾನ್ ಟ್ರಾವೆಲ್ ಬಸ್ ಹೈದರಾಬಾದ್ನಿಂದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ ಶನಿವಾರ ಮುಂಜಾನೆ 3 ಗಂಟೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಿದ್ರೆಗೆ ಜಾರಿದಾಗ ಚಾಲಕ ಬಸ್ ನ ನಿಯಂತ್ರಣ ಕಳೆದುಕೊಂಡಿದ್ದಾನೆ. ನಂತರ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.