HomeKarnatakaಬಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಕಂಡಕ್ಟರ್ ಅರೆಸ್ಟ್

ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಕಂಡಕ್ಟರ್ ಅರೆಸ್ಟ್

ಮಂಗಳೂರು: ಚಲಿಸುತ್ತಿದ್ದ ಬಸ್​ನಲ್ಲಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇರ್ಫಾನ್ (32) ಬಂಧಿತ ಕಂಡಕ್ಟರ್. ಈತ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 9 ರ ಗುರುವಾರ ಸಂಜೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ವೇಳೆ ಸೆಲಿನ ಬಸ್ ನಲ್ಲಿ ಕಂಡ್ಕ್ಟರ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದ. ಬಸ್​ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನ ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದ. ವಿದ್ಯಾರ್ಥಿನಿಯರ ಮುಂದೆ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕಂಡಕ್ಟರ್‌ ವಿರುದ್ಧ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular