HomeKarnatakaಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಬೆಳಗಾವಿ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಬಸ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ನಡೆದಿದೆ.

ಶಹಾಪುರದ ಬಶೀರ್ ಚಿಕ್ಕೋಡಿ ಮೃತ ದುರ್ದೈವಿ. ಸಾರಿಗೆ ಬಸ್ ಚಾಲಕನಾಗಿದ್ದ ಬಶೀರ್ ಚಿಕ್ಕೋಡಿ ತನ್ನ ಸ್ನೇಹಿತರೊಂದಿಗೆ ಸೇರಿ ಹಿಂಡಲಗಾದ ಸುಳಗಾದಲ್ಲಿ ಪಾರ್ಟಿ ಮಾಡಲು ಹೋಗಿದ್ದರು. ಪಾರ್ಟಿಗೆಂದು ಹೋದವರು ಶವವಾಗಿ ಪತ್ತೆಯಾಗಿದ್ದಾರೆ.

ಮೃತದೇಹವನ್ನು ಸ್ನೇಹಿತರು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಇದು ಸಹಜ ಸಾವಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಶೀರ್ ಗೆ ಕಂಠಪೂರ್ತಿ ಕುಡಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular