ಬೆಂಗಳೂರು: ಕರ್ತವ್ಯ ನಿರತ ಬಿಎಂಟಿಸಿ ಬಸ್ ಚಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಜಿಗಣಿ -ಬೊಮ್ಮಸಂದ್ರ ಮಾರ್ಗದಲ್ಲಿ ಬಸ್ ಚಾಲನೆ ಮಾಡುತ್ತಿದ್ದ ರಮೇಶ್(32) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆ ಇಳಕಲ್ಲು ಮೂಲದವರಾದ ರಮೇಶ್ ಬಿಎಂಟಿಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾನುವಾರ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದ ರಮೇಶ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಬಸ್ ಚಾಲನೆ ಮಾಡಿಕೊಂಡು ಹೋಗುವಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ರಸ್ತೆ ಬದಿಗೆ ಬಸ್ ನಿಲ್ಲಿಸಿದ ರಮೇಶ್ ಕುಸಿದು ಬಿದ್ದಿದ್ದಾರೆ.
ಬಸ್ ನಲ್ಲಿದ್ದ ಪ್ರಯಾಣಿಕರು ಮತ್ತು ಸ್ಥಳೀಯರು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ಮಾರ್ಗ ಮಧ್ಯದಲ್ಲಿ ರಮೇಶ್ ಕೊನೆಯುಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಇಳಕಲ್ಲಿಗೆ ಕೊಂಡೊಯ್ಯಲಾಗಿದೆ.

