HomeKarnatakaBREAKING : ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಕೇಸ್ : ಖಾಸಗಿ ಶಾಲಾ ಆಡಳಿತ...

BREAKING : ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಕೇಸ್ : ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಿಕ್ಕಮಗಳೂರು : 8 ನೇ ತರಗತಿ ವಿದ್ಯಾರ್ಥಿನಿ ಜೊತೆ ಬಸ್ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಶಾಲಾ ಬಸ್ ಚಾಲಕ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು, ಸಂತೋಷ್ ಮೂರು ವರ್ಷಗಳಿಂದ ಅದೇ ಶಾಲೆಯಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ನಿನ್ನೆ ವಿದ್ಯಾರ್ಥಿನಿಯನ್ನು ಸಂತೋಷ್ ತನ್ನೊಂದಿಗೆ ಕರೆದುಕೊಂಡು ಹೋಗಿ ಮಧ್ಯರಾತ್ರಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದನು.

ಪ್ರಕರಣ ಸಂಬಂಧ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular