HomeKarnatakaBIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ಆದರೂ ಪ್ರಯಾಣಿಕರ ಜೀವ ಉಳಿಸಿದ ಡ್ರೈವರ್

BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ಆದರೂ ಪ್ರಯಾಣಿಕರ ಜೀವ ಉಳಿಸಿದ ಡ್ರೈವರ್

ಬೆಳಗಾವಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವುಂಟಾಗಿದ್ದು, ತಾನು ಸಾವಿನ ಕದ ತಟ್ಟುತ್ತಿದ್ದರೂ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರ ಜೀವ ಉಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಬೆಳಗಾವಿಯ ಸವದತ್ತಿಯಿಂದ ಪುಣೆಗೆ ತೆರಳುತ್ತಿತ್ತು. ಬಸ್ ಮಹಾರಾಷ್ಟ್ರದ ಖೇಡಶಿವಾಪುರ ಬಳಿ ಚಲಿಸುತ್ತಿದ್ದಂತೆ ಚಾಲಕ ಶಿವಪುತ್ರಪ್ಪ ಸಂಗೊಳ್ಳಿ (41)ಯವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಬಸ್ ನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಎದೆನೋವಿನಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಚಾಲಕ ಶಿವಪುತ್ರಪ್ಪ ಅವರನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಅವರು ಉಸಿರು ಚಲ್ಲಿದ್ದಾರೆ.

ಆಸ್ಪತ್ರೆಗೆ ಬರುವಷ್ಟರಲ್ಲಿ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular