HomeKarnatakaಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಕಾರವಾರ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಟೈರ್ ಸ್ಫೋಟಗೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರಸ್ತೆಯಲ್ಲಿ ನಡೆದಿದೆ.

ಧಾರಾಕಾರ ಮಳೆ ನಡುವೇ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರ ಗಮನಕ್ಕೆ ಬರುತ್ತಿದ್ದಂತೆ ಪ್ರಯಣಿಕರು ಕೂಗಿಕೊಂಡಿದ್ದಾರೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬಸ್ ನ ಟೈರ್ ಸ್ಫೋಟಗೊಂಡಿದೆ. ಕ್ಷಣಾರ್ಧದಲ್ಲಿ ಭಾರಿ ಅನಾಹುತ ತಪ್ಪಿದೆ.

25 ಜನರಿದ್ದ ಬಸ್ ಮುರುಡೇಶ್ವರದಿಂದ ಅಥಣಿ ಕಡೆಗೆ ತೆರಳುತ್ತಿತ್ತು. ಬಸ್ ನ ಟೈರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಇದನ್ನು ಗಮನಿಸಿ ಕೂಗಿಕೊಂಡಿದ್ದಾರೆ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದಂತೆ ಟೈರ್ ಬ್ಲಾಸ್ಟ್ ಆಗಿ ಬೆಂಕಿ ಉರಿಯಲಾರಂಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular