ಬೆಳಗಾವಿ: ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕೆಆಸ್ ನಲ್ಲಿ ನಡೆದಿದೆ.
ಬೈಲಹೊಂಗಲ ಕಡೆಯಿಂದ ತೆರುತ್ತಿದ್ದ ಪ್ರಯಾಣಿಕರ ಬಸ್ ಹಾಗೂ ಹಾಗೂ ಇಟ್ಟಿಗೆ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.