HomeLatest NewsBREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿ ನಾಲ್ವರು ದುರ್ಮರಣ

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿ ನಾಲ್ವರು ದುರ್ಮರಣ

ಬೆಂಗಳೂರು: ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 16 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular