HomeKarnatakaBREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

BREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.

ಸಮರ್ಥ (7) ಹಾಗೂ ಶ್ರೀಕಾಂತ್ (12) ಮೃತ ವಿದ್ಯಾರ್ಥಿಗಳು. ಅಪಘಾತದಲ್ಲಿ 32 ಜನರು ಗಾಯಗೊಂಡಿದ್ದು, ಅವರಲ್ಲಿ 18 ಜನರನ್ನು ರಿಮ್ಸ್ ಆಸ್ಪತ್ರೆಗೆ ಹಾಗೂ 14 ವಿದ್ಯಾರ್ಥಿಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳ ಕೈ, ಕಾಲು ಮುರಿದಿದ್ದರೆ ಇನ್ನು ಕೆಲ ವಿದ್ಯಾರ್ಥಿಗಳ ಕೈ-ಕಲೌ ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular