ಪುಣೆ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಯಾತ್ರಾರ್ಥಿಗಳು ಆಶಾಢ ಏಕಾದಶಿ ಹಿನ್ನೆಲೆಯಲ್ಲಿ ದೊಂಬಿವ್ಲಿಯಿಂದ ಪಂಡರಾಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ನಸುಕಿನಜಾವ 1ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ. ಬಸ್ ನಲ್ಲಿ 80ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ನವಿಮುಂಬೈ ಪೊಲೀಸರು ತಿಳಿಸಿದ್ದಾರೆ.
https://twitter.com/ANI/status/1812956588639945206?ref_src=twsrc%5Etfw%7Ctwcamp%5Etweetembed%7Ctwterm%5E1812956588639945206%7Ctwgr%5E4084effa5ca33ccc9d31fa72fea92d71119c2ca3%7Ctwcon%5Es1_&ref_url=https%3A%2F%2Ftimesofindia.indiatimes.com%2Fcity%2Fmumbai%2F4-dead-several-injured-after-bus-falls-in-ditch-on-mumbai-pune-expressway%2Farticleshow%2F111768163.cms