HomeIndiaBREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು...

BREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು ಜನ ಗಂಭೀರ

ಪುಣೆ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.

ಯಾತ್ರಾರ್ಥಿಗಳು ಆಶಾಢ ಏಕಾದಶಿ ಹಿನ್ನೆಲೆಯಲ್ಲಿ ದೊಂಬಿವ್ಲಿಯಿಂದ ಪಂಡರಾಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ.

ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ನಸುಕಿನಜಾವ 1ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ. ಬಸ್ ನಲ್ಲಿ 80ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ನವಿಮುಂಬೈ ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular