HomeIndiaBREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

BREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

ಅಹಮದಾಬಾದ್: ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ.

ಆನಂದ ಪಟ್ಟಣದ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಬಸ್ ನಲ್ಲಿದ್ದ 6 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಟ್ರಕ್ ನ ಬ್ರೇಕ್ ಫೇಲ್ ಆಗಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular