HomeKarnatakaBREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ.

ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಲಿಸುತ್ತಿದ್ದ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದಿವೆ. ಹುಬ್ಬಳ್ಳಿ ಕಡೆಯಿಂದ ಹಾವೇರಿಗೆ ಬರುತ್ತಿದ್ದ ಸಾರಿಗೆ ಬಸ್ ನಲ್ಲಿ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಸಾರಿಗೆ ಬಸ್ ನಲ್ಲಿದ್ದ 40 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

(ಸಾಂದರ್ಭಿಕ ಚಿತ್ರ)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular