HomeIndiaBIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ.

ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಾಯಾಳು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೈಫಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಲೀಪರ್ ಬಸ್ ಲಕ್ನೋದಿಂದ ಆಗ್ರಾದತ್ತ ಬರುತ್ತಿತ್ತು. ಈ ವೇಳೆ ರಾಂಗ್ ಸೈಡ್ ನಿಂದ ಬರುತ್ತಿದ್ದ ವಾಟರ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್ ನಲ್ಲಿ ಸುಮಾರು 40 ಜನರು ಇದ್ದರು. ಸ್ಥಳದಲ್ಲೇ 7 ಜನರು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular