HomeLatest Newsನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಹೋದ ಬಸ್; ಕಂದಮ್ಮ ಸ್ಥಳದಲ್ಲೇ ಸಾವು

ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಹೋದ ಬಸ್; ಕಂದಮ್ಮ ಸ್ಥಳದಲ್ಲೇ ಸಾವು

ರಾಯಚೂರು: ನಾಲ್ಕು ವರ್ಷದ ಮಗುವಿನ ಮೇಲೆ ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ನಲ್ಲಿ ನಡೆದಿದೆ.

ನಾಲ್ಕು ವರ್ಷದ ವಿದ್ಯಾಶ್ರೀ ಮೃತ ಕಂದಮ್ಮ. ಗೂಗಲ್ ನಿಂದ ದೇವದುರ್ಗಕ್ಕೆ ತೆರಳುತ್ತಿದ್ದ ಬಸ್ ಗೆ ಬಾಲಕಿ ಅಚಾನಕ್ ಆಗಿ ರಸ್ತೆಯಲ್ಲಿ ಅಡ್ಡ ಬಂದಿದ್ದಾಳೆ. ಬಸ್ ಮಗುವಿನ ಮೇಲೆಯೇ ಹರಿದು ಹೋಗಿದ್ದು, ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ.

ಬಸ್ ಬರುವುದನ್ನೂ ಗಮನಿಸದೇ ಮಗು ರಸ್ತೆ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಗು ಬಸ್ ಚಕ್ರದಡಿ ಸಿಲುಕಿ ದುರಂತ ಅಂತ್ಯಕಂಡಿದೆ. ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular