HomeLatest NewsBIG NEWS: ಕಂದಕಕ್ಕೆ ಉರುಳಿದ ಬಸ್: 20 ಜನರು ದುರ್ಮರಣ ಹಲವರ ಸ್ಥಿತಿ ಗಂಭೀರ

BIG NEWS: ಕಂದಕಕ್ಕೆ ಉರುಳಿದ ಬಸ್: 20 ಜನರು ದುರ್ಮರಣ ಹಲವರ ಸ್ಥಿತಿ ಗಂಭೀರ

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 20 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್, ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ 20 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular