HomeKarnatakaಚಲಿಸುತ್ತಿದ್ದ ಬಸ್ ಟೈರ್ ಸ್ಫೋಟಗೊಂಡು ಪಲ್ಟಿ: ಭೀಕರ ಅಪಘಾತದಲ್ಲಿ ಮಹಿಳೆ ದುರ್ಮರಣ

ಚಲಿಸುತ್ತಿದ್ದ ಬಸ್ ಟೈರ್ ಸ್ಫೋಟಗೊಂಡು ಪಲ್ಟಿ: ಭೀಕರ ಅಪಘಾತದಲ್ಲಿ ಮಹಿಳೆ ದುರ್ಮರಣ

ಧಾರವಾಡ: ಚಲಿಸುತ್ತಿದ್ದ ಸರ್ಕಾರಿ ಬಸ್ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿಯಲ್ಲಿ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡದಿಂದ ಮಿರಜ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್ ಟೈರ್ ಸ್ಫೋಟಗೊಂಡು​​ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಘಟನೆಯಲ್ಲಿ ಮಹಿಳೆಯರು, ವೃದ್ಧರು ಸೇರಿ 8 ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಇತರ ವಾಹನಗಳ ಸವಾರರು ಮತ್ತು ಸ್ಥಳೀಯರು ಬಸ್​​ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಗೆ ಬಸ್​​ನ ಗಾಜುಗಳು ​​ಪುಡಿ ಪುಡಿಯಾಗಿವೆ. ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular