ಮುಂಬೈ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ತಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಮನ್ವತ್ ಪಟ್ಟಣದ ಬಳಿ ತಡರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

