ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ‘ಕಾನ್ಫಿಡೆಂಟ್ ಗ್ರೂಪ್’ (Confident Group) ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದ ಸಿ.ಜೆ. ರಾಯ್ (C.J. Roy) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಚೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ ನಲ್ಲಿ ಇಂದು ಉದ್ಯಮಿ ಸಿ.ಜೆ ರಾಯ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಹೋದರ ಬಾಬು ಜೋಸೆಫ್ ಒಡೆತನದ ಕೋರಮಂಗದಲ ವೈಟ್ ಹೌಸ್ ನಲ್ಲಿ ಮೃತ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಮೂಲಗಳು ತಿಳಿಸಿದೆ.
ಸಿಜೆ ರಾಯ್ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಕೇಸ್ ದಾಖಲಿಸಿಕೊಂಡಿದ್ದು, ಪೋಸ್ಟ್ ಮಾರ್ಟ್ಂ ರಿಪೋರ್ಟ್ , ಎಫ್ ಎಸ್ ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಸಿ.ಜೆ ರಾಯ್ ಅವರು ಐಟಿ ದಾಳಿ ಹಿನ್ನೆಲೆ ಮನನೊಂದು ರೂಮಿಗೆ ಹೋಗಿ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನ್ಲಾಗಿದೆ. ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

