HomeKarnatakaBREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಉದ್ಯಮಿ ಮೋಹನ್ ದಾಸ್(53) ಮೃತಪಟ್ಟವರು ಅವರು ಹುಣಸೂರಿನ ಕಲ್ಕುಣಿಕೆಯ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾರೆ.

ಆಗಸ್ಟ್ 18ರಂದು ಮನೆಯಿಂದ ಬೈಕ್ ನಲ್ಲಿ ತೆರಳಿದ ಸಂದರ್ಭದಲ್ಲಿ ಮಡಿಕೇರಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರ್ ಡಿಕ್ಕಿ ಹೊಡೆದು ಮೋಹನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಉದ್ಯಮಿ ಮೋಹನ್ ಸಾವನ್ನಪ್ಪಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular