HomeLatest Newsಜಡ್ಜ್ ಆಗಲು 3 ವರ್ಷ ವಕೀಲಿಕೆ ಪೂರ್ವಾನ್ವಯ ಇಲ್ಲ: ಸುಪ್ರೀಂಕೋರ್ಟ್ ಸ್ಪಷ್ಟನೆ

ಜಡ್ಜ್ ಆಗಲು 3 ವರ್ಷ ವಕೀಲಿಕೆ ಪೂರ್ವಾನ್ವಯ ಇಲ್ಲ: ಸುಪ್ರೀಂಕೋರ್ಟ್ ಸ್ಪಷ್ಟನೆ

ನವದೆಹಲಿ: ಜಡ್ಜ್ ಆಗಲು ಮೂರು ವರ್ಷ ವಕೀಲಿಕೆ ಪೂರ್ವಾನ್ವಯ ಇಲ್ಲ. ಮೇ 20ರ ನಂತರ ನೇಮಕಾತಿಗೆ ಮಾತ್ರ ಅನ್ವಯವಾಗಲಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಜಡ್ಜ್ ಆಗಲು ಪ್ರವೇಶ ಮಟ್ಟದ ನ್ಯಾಯಾಂಗ ಸೇವೆಗಳ ಪರೀಕ್ಷೆ ಬರೆಯುವವರು ಕಡ್ಡಾಯವಾಗಿ ಮೂರು ವರ್ಷ ವಕೀಲಿಕೆ ಮಾಡಿರಬೇಕು ಎಂಬ ನಿಯಮ ಆದೇಶ ಹೊರಡಿಸಿದ ಮೇ 20ರ ನಂತರ ನೇಮಕವಾಗುವವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

ಮೇ 14ರಂದು ನಡೆದ ನೇಮಕಾತಿಯ ವೇಳೆ ಜಮ್ಮು ಮತ್ತು ಕಾಶ್ಮೀರ ಸಾರ್ವಜನಿಕ ಸೇವಾ ಆಯೋಗ 3 ವರ್ಷಗಳ ಅಭ್ಯಾಸ ಕಡ್ಡಾಯಗೊಳಿಸಿರಲಿಲ್ಲ. ಇದನ್ನು ಪ್ರಶ್ನಿಸಿ ನವೀದ್ ಬುಖ್ತಿಯಾ ಸೇರಿ ಐವರು ವಕೀಲರು ಅರ್ಜಿ ಸಲ್ಲಿಸಿದ್ದರು. ಇದನ್ನು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠ ತಿರಸ್ಕರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular