ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಪಿಗೆಹಳ್ಲಿ ಪೊಲೀಸರು ಎರಡು ಎಫ್ ಐ ಆರ್ ದಾಖಲಿಸಿದ್ದಾರೆ.
ಇನ್ ವಿಷನ್ ಬೆಂಗಳೂರು ಎಂಬ ಸಂಸ್ಥೆ ನಡೆಸುತ್ತಿದ್ದ ವಿವೇಕಾನಂದ ಆತ್ಮಹತ್ಯೆ ಪ್ರಕರಣ ಸಂಬಂಧ ಪತ್ನಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಿಸಲಾಗಿದೆ. ಹೂಡಿಕೆದಾರರ ಒತ್ತಡದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದರು.
ಪತಿ ವಿವೇಕಾನಂದ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದರು. ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ಹೂಡಿಕೆ ಮಾಡುತ್ತಿದ್ದರು. ಆದರೆ ವಿವೇಕಾನಂದ ಅವರಿಗೆ ಷೇರುಮಾರುಕಟ್ಟೆಯಲ್ಲಿ ನಷ್ಟವುಂಟಾಗಿತ್ತು. ಹೂಡಿಕೆದಾರರು ತಮ್ಮ ಹಣ ಹಿಂತಿರುಗಿಸುವಂತೆ ಒತ್ತಾಯಿಸುತ್ತಿದ್ದರು. ಇದೇ ಕಾರಣಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ದೂರು ದಾಖಲಿಸಿದ್ದರು.
ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹಿನ್ನೆಲೆಯಲ್ಲಿ ಸಂಪಿಗೆಹಳ್ಳಿ ಠಾಣೆಯಲ್ಲಿ ಬಿಎನ್ ಎಸ್ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲಿಸರು ತನಿಖೆ ಆರಂಭಿಸಿದ್ದಾರೆ.

