HomeLatest Newsಚಲಿಸುತ್ತಿದ್ದ ಬಸ್ ನ ಬಾಗಿಲು ಏಕಾಏಕಿ ಓಪನ್: ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು

ಚಲಿಸುತ್ತಿದ್ದ ಬಸ್ ನ ಬಾಗಿಲು ಏಕಾಏಕಿ ಓಪನ್: ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು

ಮಂಗಳೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಬಾಗಿಲು ಇದ್ದಕ್ಕಿದ್ದಂತೆ ಓಪನ್ ಆಗಿದ್ದು, ಇಬ್ಬರು ವಿದ್ಯಾರ್ಥಿಗಳು ಬಸ್ ನಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ರೇಶ್ಮೆ ರೋಡ್ ಬಳಿ ಚಲಿಸುತ್ತಿದ್ದ ಬಸ್ ನ ಬಾಗಿಲು ಹಠಾತ್ ಆಗಿ ಓಪನ್ ಆಗಿದ್ದು, ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಈ ಭಯಾನಕ ದೃಶ್ಯದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಸೇರಿ ಒಂದೇ ಮನೆಯ ಇಬ್ವರು ವಿದ್ಯಾರ್ಥಿನಿಯರು ಸಾರಿಗೆ ಬಸ್ ನಿಂದ ಬಿದ್ದು ಗಾಯಗೊಂಡಿದ್ದಾರೆ. ಬಸ್​ನ ಬಾಗಿಲು ಏಕಾಏಕಿ ತೆರೆದಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿದ್ದಾಳೆ. ಆಕೆಯೂ ನಿಯಂತ್ರಣ ತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಸ್ಥಳೀಯರ ಸಹಕಾರದಿಂದ ಚಿಕಿತ್ಸೆಗಾಗಿ ಬೆಳ್ತಂಗಡಿ ಹಾಗೂ ಉಜಿರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಓರ್ವ ವಿದ್ಯಾರ್ಥಿನಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದರೆ, ಮತ್ತೋರ್ವ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದಾರೆ. ಇವರು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿಗಳ ಮಕ್ಕಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಚಿಕಿತ್ಸೆ ಬಳಿಕ ಸಹಾಯಕಿಯ ನೆರವಿನೊಂದಿಗೆ ಗಾಯಾಳು ವಿದ್ಯಾರ್ಥಿನಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾಳೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular