HomeLatest NewsBIG NEWS: ಟೈರ್ ಸ್ಫೋಟಗೊಂಡು ಬಸ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ಭೀಕರ ಅಪಘಾತದಲ್ಲಿ ನಾಲ್ವರು...

BIG NEWS: ಟೈರ್ ಸ್ಫೋಟಗೊಂಡು ಬಸ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ಭೀಕರ ಅಪಘಾತದಲ್ಲಿ ನಾಲ್ವರು ಸಜೀವದಹನ

ಅಹಮದಾಬಾದ್: ಟ್ಯಾಂಕರ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸಜೀವದಹನವಾಗಿರುವ ಘಟನೆ ನಡೆದಿದೆ. ಗುಜರಾತ್ ನಲ್ಲಿ ಈ ದುರಂತ ಸಂಭವಿಸಿದೆ.

ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ತೆರಳುತ್ತಿದ್ದ ಖಾಸಗಿ ಲುರಿ ಬಸ್, ಸುರೇಂದ್ರನಗರ ಜಿಲ್ಲೆಯ ಚೋಟಿನಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಾಂಗಾನಿ ಗ್ರಾಮದ ಬಳಿ ಮುಂಜಾನೆ 2:30ರ ಸುಮಾರಿಗೆ ತೆರಳುತ್ತಿದ್ದ ವೇಳೆ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ನಾಲ್ವರು ಪ್ರಯಾಣಿಕರು ಸಜೀವದಹನವಾಗಿದ್ದು, 10ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. 

ಟ್ಯಾಂಕರ್‌ನ ಟೈ‌ರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ನಾಲ್ವರು ಬೆಂಕಿಯಲ್ಲಿ ಸುಟ್ಟು ಹೋಗಿದ್ದಾರೆ. 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಪ್ರಯಾಣಿಕರು ಗಾಬರಿಯಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಆದರೆ ನಾಲ್ವರು ಪ್ರಯಾಣಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ 10 ಜನರನ್ನು ರಕ್ಷಿಸಿ ರಾಜ್‌ಕೋಟ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular