ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಗೆ ರೈಲು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಾದರಮಂಗಲದ ಬಳಿ ಈ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕ ರೈಲ್ವೆ ಹಳಿ ಕ್ರಾಸ್ ಮಾಡಿ ಬಸ್ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ವೇಗವಾಗಿ ಬಂದ ರೈಲು ಬಸ್ ಗೆ ಗುದ್ದಿದೆ. ರೈಲ್ವೆ ಪ್ಯಾರ್ಲರ್ ರೋಡ್ ನಲ್ಲಿ ಬಸ್ ರಿವರ್ಸ್ ತೆಗೆದುಕೊಳ್ಳುವಾಗ ಈ ಅವಘಡ ಸಂಭವಿಸಿದೆ. ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ.
ಅಪಘಾತದ ರಭಸಕ್ಕೆ ಬಸ್ ನ ಹಿಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣಿಕರು ಇರಲಿಲ್ಲ. ಹಾಗಾಗಿ ಭಾರಿ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಬಸ್ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

