ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸುವಂತಹ ಘಟನೆಗಳು ಪದೇ ಪಡೆ ನಡೆಯುತ್ತಲೇ ಇರುತ್ತದೆ. ಇದೀಗ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಇಂತದ್ದೇ ಘಟನೆ ನಡೆದಿದೆ.
ಬೆಂಗಳೂರಿನಿಂದ ನೆಲಮಂಗಲದ ಕಡೆಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಸಹಪ್ರಯಾಣಿಕ ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಆತನನ್ನು ಹಿಡುದು ಕಪಾಳ ಮೋಕ್ಷ ಮಾಡಿದ್ದಾಳೆ.
ಈ ವೇಳೆ ಇತರ ಪ್ರಯಾಣಿಕರು ಆರೋಪಿಯನ್ನು ಹಿಡಿದುಕೊಂಡಿದ್ದು, ಕಪಾಳಕ್ಕೆ ಎರಡು ಭಾರಿಸುವಂತೆ ಹೇಳಿದ್ದಾರೆ. ಬಸ್ ನಲ್ಲಿಯೇ ಯುವತಿ ಕಾಮುಕ ಆರೋಪಿಗೆ ಹಿಗ್ಗಾ ಮುಗ್ಗಾ ಕಪಾಳಮೋಕ್ಷ ಮಾಡಿದ್ದಾಳೆ. ವಿಕೃತಿ ಮೆರೆದ ಪುಂಡನಿಗೆ ತಕ್ಕ ಶಾಸ್ತಿಯಾಗಿದೆ.

