ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕಣ ರಂಗೇರಿದೆ. ಸೋಮವಾರದಿಂದ ಪ್ರಚಾರ ಮತ್ತಷ್ಟು ಜೋರಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಸೋಮವಾರದಿಂದ ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಸೋಮವಾರ ಬಾಗಲಕೋಟೆಗೆ ತೆರಳಲ್ಲಿರುವ ಸಿದ್ದರಾಮಯ್ಯ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಎರಡು ದಿನ ಪ್ರಚಾರ ನಡೆಸಲಿದ್ದಾರೆ. ನಂತರ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರವಾಗಿ ಮತಯಾಚಿಸಲಿದ್ದಾರೆ. ಅಸ್ಸಾಂ ಪ್ರವಾಸದಲ್ಲಿರುವ ಡಿ.ಕೆ. ಶಿವಕುಮಾರ್ ಇಂದು ರಾತ್ರಿ ಅಥವಾ ನಾಳೆ ರಾಜ್ಯಕ್ಕೆ ವಾಪಸ್ಸಾಗಲಿದ್ದು, ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.

