HomeKarnatakaBIG NEWS: ಉಪಚುನಾವಣೆಯಲ್ಲಿ ಬಿಜೆಪಿ ಸೋಲು: ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತ

BIG NEWS: ಉಪಚುನಾವಣೆಯಲ್ಲಿ ಬಿಜೆಪಿ ಸೋಲು: ಟಿವಿ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತ

ವಿಜಯಪುರ: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿಯೂ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ನಿಖಿಲ್ ಸೋಲಿನಿಂದ ನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಬಿಜೆಪಿ ಸೋಲಿನಿಂದ ನೊಂದ ಕಾರ್ಯಕರ್ತನೊಬ್ಬ ಟಿವಿಯನ್ನೇ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪಚುನಾವಣಾ ಫಲಿತಾಂಶ ಟಿವಿಯಲ್ಲಿ ನೋಡುತ್ತಿದ್ದ ಬಿಜೆಪಿ ಕಾರ್ಯಕರ್ತ, ಬಿಜೆಪಿಗೆ ಸಾಲು ಸಾಲು ಸೋಲು ಎನ್ನುತ್ತಿದ್ದಂತೆ ಟಿವಿಯನ್ನೇ ಎತ್ತಿಕೊಂಡು ಬಂದು ಒಡೆದು ಹಾಕಿದ್ದಾರೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ವೀರಭದ್ರಪ್ಪ ಭಾಗಿ ಎನ್ನುವವರು ತಮ್ಮ ಮನೆಯಲ್ಲಿದ್ದ ಟಿವಿಯನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ನಾಯಕರಲ್ಲಿರುವ ಭಿನ್ನಾಭಿಪ್ರಾಯ, ಬಿರುಕು, ಬಣ ರಾಜಕೀಯವೇ ಸೋಲಿಗೆ ಕಾರಣ ಎಂದು ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಲ್ಲಿನ ಭಿನ್ನಾಭಿಪ್ರಾಯಗಳಿಂದಾಗಿ ಕಾರ್ಯಕರ್ತರಲ್ಲಿಯೂ ಒಗ್ಗಟ್ಟು ಇಲ್ಲದಂತ ಸ್ಥಿತಿ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular