HomeKarnatakaಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟು: ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ

ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟು: ಬೆಂಗಳೂರಿಗೆ ರಣದೀಪ್ ಸಿಂಗ್ ಸುರ್ಜೇವಾಲ

ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ಗೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮಾರ್ಚ್ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

 ಎರಡು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಟಿಕೆಟ್‌ಗೆ ಭಾರೀ ಪೈಪೋಟಿ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಆದ್ದರಿಂದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದಿದ್ದಾರೆ.

ಕರ್ನಾಟಕದ 2 ದಿನದ ಪ್ರವಾಸದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಲು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಿಂದ ಬೆಂಗಳೂರಿಗೆ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತ ದಾವಣಗೆರೆಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ದಾವಣಗೆರೆ ದಕ್ಷಿಣದ ಉಪ ಚುನಾವಣೆಗೆ ತಾಯಿ, ದಾವಣಗೆರೆ ಸಂಸದ ಡಾ.ಪ್ರಭಾ ಮಲ್ಲಿಕಾರ್ಜುನ ಜೊತೆ ಬಿ-ಫಾರಂ ಇಲ್ಲದೇ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಸಮರ್ಥ ಶಾಮನೂರು ಅವರಿಗೆ ಟಿಕೆಟ್ ನೀಡಲು ಜಿಲ್ಲಾ ಕಾಂಗ್ರೆಸ್‌ನಲ್ಲೇ ವಿರೋಧವಿದೆ. ಶಾಮನೂರು ಕುಟುಂಬದಲ್ಲಿ ಒಬ್ಬರು ಸಂಸದರು, ಒಬ್ಬರು ಸಚಿವರಿದ್ದಾರೆ. ಆದ್ದರಿಂದ ಬೇರೆಯವರಿಗೆ ಟಿಕೆಟ್ ನೀಡಿ ಎಂಬುದು ಬೇಡಿಕೆಯಾಗಿದೆ.

ಆದರೆ ಎಸ್.ಎಸ್.ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಅವರಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ 80,000 ಮುಸ್ಲಿಂ ಮತಗಳಿವೆ. ಆದ್ದರಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಬಲವಾಗಿ ಕೇಳಿ ಬರುತ್ತಿದೆ.

ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಸಮುದಾಯದ ಮುಖಂಡರು ಎಚ್ಚರಿಸಿದ್ದಾರೆ. ಆದ್ದರಿಂದ ಅಭ್ಯರ್ಥಿ ಆಯ್ಕೆ ಸಾಧ್ಯವಾಗಿಲ್ಲ.

ಸಿಎಂ, ಡಿಸಿಎಂ ಜೊತೆ ಸಭೆ: ರಣದೀಪ್ ಸಿಂಗ್ ಸುರ್ಜೇವಾಲ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಸಭೆ ನಡೆಸಲಿದ್ದಾರೆ. ಶನಿವಾರ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಬಾಗಲಕೋಟೆ ಕಗ್ಗಂಟು: ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಮಾಡುವುದು ಕಗ್ಗಂಟಾಗಿದೆ. ಬುಧವಾರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು. ಆದರೆ ಅಭ್ಯರ್ಥಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ.

ಮಹಾದೇವಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಸಿದ್ದು, ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸುಳಿವು ನೀಡಿದ್ದು, ಕಾಂಗ್ರೆಸ್ ನಾಯಕರ ತಲೆನೋವಿಗೆ ಕಾರಣವಾಗಿದೆ. ಮೇಟಿ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಬಯಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular