HomeKarnatakaBIG NEWS: ಉಪಚುನಾವಣೆ: ವ್ಹೀಲ್ ಚೇರ್ ನಲ್ಲಿಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಿದ ವಯೋವೃದ್ಧೆ

BIG NEWS: ಉಪಚುನಾವಣೆ: ವ್ಹೀಲ್ ಚೇರ್ ನಲ್ಲಿಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಿದ ವಯೋವೃದ್ಧೆ

ಶಿಗ್ಗಾಂವಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ.

ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರು ಉತ್ಸಾಹದಿಂದಲೇ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಸಖಿ ಮತಗಟ್ಟೆ ಸೇರಿದಂತೆ ವಿವಿಧ ರೀತಿಯ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಶಿಗ್ಗಾಂವಿಯಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿರಿಸಿನಿಂದ ಮತದಾನ ನಡೆಯುತ್ತಿದೆ. ಚುನವಣಾ ಸಿಬ್ಬಂದಿಯ ಸಹಾಯದೊಂದಿಗೆ ಶಿಗ್ಗಾಂವಿಯ ಮತಗಟ್ಟೆಯೊಂದಕ್ಕೆ ವಯೋವೃದ್ಧೆಯೊಬ್ಬರು ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಹೀಲ್ ಚೇರ್ ನಲ್ಲಿಯೇ ಮತಗಟ್ಟೆಗೆ ಆಗಮಿಸಿದ ವಯೋವೃದ್ಧೆ ಇಳಿಯವಸ್ಸಿನಲ್ಲಿಯೂ ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

For Latest News Updates, Join Our Whatsapp Community🚩
RELATED ARTICLES

Most Popular