HomeUncategorizedಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಖಾಡ ದಿನಂದ ದಿನಕ್ಕೆ ರಂಗೇರುತ್ತಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷ.

ಮಲ್ಲಿಕಾರ್ಜುನ ಚರಂತಿಮಠ ಅವರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಪ್ರಚಾರ ನಡೆಸುತ್ತಿದ್ದು, ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ ಇದೆ. ಜನ ಅವರಿಗೆ ಮತ ಹಾಕಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಐದು ದಿನಗಳ ಕಾಲ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲು ಬರುತ್ತಿದ್ದು, ಇದು ಪಕ್ಷಕ್ಕೆ ಮತ್ತಷ್ಟು ಬಲ ತರಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular