ರಾಯಚೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ರಾಜಕೀಯ ನಾಯಕರು ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಉಪಚುನಾವಣಾ ಅಖಾಡ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿಹೆ ಪ್ರತಿಷ್ಠೆಯ ಕಣವಾಗಿದೆ.
ರಾಯಚೂರಿನ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಎರಡೂವರೆ ವರ್ಷದಲ್ಲಿ ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಸರ್ಕಾರದ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದರು. ಎರಡೂ ಕ್ಷೇಯ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಎರಡೂ ಕ್ಷೇತ್ರಗಳಲ್ಲಿಯೂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ನಿಭಾಯಿಸುತ್ತೇನೆ. ಬಾಗಲಕೋಟೆಯಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

