HomeKarnatakaಅನುಭವಿ ಸಿಎಂ ಆಗಿದ್ದರೂ ಕೂಡ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿಲ್ಲ; ಉಪಚುನಾವಣೆ ಕಾಂಗ್ರೆಸ್ ನಾಯಕರಿಗೆ ನಿದ್ದೆಗೆಡಿಸಿದೆ: ಬಿ.ವೈ.ವಿಜಯೇಂದ್ರ...

ಅನುಭವಿ ಸಿಎಂ ಆಗಿದ್ದರೂ ಕೂಡ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿಲ್ಲ; ಉಪಚುನಾವಣೆ ಕಾಂಗ್ರೆಸ್ ನಾಯಕರಿಗೆ ನಿದ್ದೆಗೆಡಿಸಿದೆ: ಬಿ.ವೈ.ವಿಜಯೇಂದ್ರ ಟೀಕೆ

ದಾವಣಗೆರೆ: ಉಪಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ನಿದ್ದೆಗೆಡಿಸುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಜಯೇಂದ್ರ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಇದ್ದರೂ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರ ಮಾಡಿಕೊಂಡು ಬಂದಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳುವ ಸಲುವಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಅನುಭವಿ ಸಿಎಂ ಆಗಿದ್ದರೂ ಕೂಡ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿಲ್ಲ. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿಎಂ ಅಹಿಂದ ಸಮುದಾಯವನ್ನೇ ಮರೆತಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಈ ಎರಡು ಉಪಚುನಾವಣೆಗಳು ಸಿಎಂ ಹಾಗೂ ಕಾಂಗ್ರೆಸ್​ಗೆ ಕಬ್ಬಿಣದ ಕಡಲೆಯಾಗಿದೆ. ಸಿಎಂ ಉಪಚುನಾವಣೆಯಿಂದ ಗಲಿಬಿಲಿಯಾಗಿದ್ದಾರೆ. ಶಕ್ತಿ ಮೀರಿ ನಮ್ಮ ಬಿಜೆಪಿ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಮುಂದಾಗಿದ್ದಾರೆ. ನಮ್ಮ ಕಾರ್ಯಕರ್ತರ ಶ್ರಮವನ್ನು ಬೇರಾವುದೇ ಕಾರ್ಯಕರ್ತರು ಹಾಕಲು ಸಾಧ್ಯವಿಲ್ಲ. ಇದರಿಂದಾಗಿ ನಮ್ಮ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಗೆಲುವು ಸಾಧಿಸುತ್ತಾರೆ. ಜನತೆ ಬದಲಾವಣೆ ಬಯಸುತ್ತಿದ್ದಾರೆ ಎಂದರು.

ಕಾಂಗ್ರೆಸ್ಸಿನ ಹಣ ಬಲ ಇಲ್ಲಿ ವರ್ಕೌಟ್​ ಆಗುವುದಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಶ್ರಮ ವಹಿಸುತ್ತಿದ್ದಾರೆ. ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ನಾಗಾಲೋಟಕ್ಕೆ ನಮ್ಮ ಕಾರ್ಯಕರ್ತರು ಕಡಿವಾಣ ಹಾಕಲಿದ್ದಾರೆ. ಕಾಂಗ್ರೆಸ್​ ವಿರುದ್ಧ ಯಾವತ್ತೂ ಈ ಮಟ್ಟಿಗೆ ಮುಸ್ಲಿಮರು ವಿರೋಧ ತೋರಿಸಿರಲಿಲ್ಲ. ಖಾಲಿ ಡಬ್ಬ ತುಂಬಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡುತ್ತಾರೆ‌. ಖಾಲಿ ಡಬ್ಬ ಯಾರೆನ್ನುವುದು ಸಂತೋಷ್ ಲಾಡ್ ತಿಳಿದುಕೊಳ್ಳಲಿ ಎಂದು ಟಾಂಗ್​ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular