HomeKarnatakaBIG NEWS: ದಾವಣಗೆರೆಯಲ್ಲಿ ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತರ್ತಾರೆ: ವಿಜಯೇಂದ್ರ ಗಂಭೀರ ಆರೊಪ

BIG NEWS: ದಾವಣಗೆರೆಯಲ್ಲಿ ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತರ್ತಾರೆ: ವಿಜಯೇಂದ್ರ ಗಂಭೀರ ಆರೊಪ

ಬಾಗಲಕೋಟೆ: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ.

ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದ ಜನ ಕಾಂಗ್ರೆಸ್ ಸರ್ಕಾರದಿಂದ ಬೇಸತ್ತಿದ್ದಾರೆ. ಇದು ಬಡವರು ಮತ್ತು ದೀನದಲಿತರ ವಿರೋಧಿ ಸರ್ಕಾರ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯದ ರಾಜಕೀಯ ವಾತಾವರಣ ನೋಡಿದರೆ ಬಿಜೆಪಿ ಗೆಲುವು ಖಚಿತ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಕಮಲದ ಹೂವು ಅರಳುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಅಲ್ಲದೆ, ಈ ಹಿಂದೆ ಸಿರಾ ಮತ್ತು ಕೆಆರ್ ಪೇಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕುತಂತ್ರ ಮಾಡಿತ್ತು ಎಂದು ಆರೋಪಿಸಿದ ಅವರು, ಮತದಾನ ಕೊನೆಯ ದಿನದವರೆಗೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಇದ್ದ ಸಣ್ಣಪುಟ್ಟ ಗೊಂದಲಗಳನ್ನು ಬಗೆಹರಿಸಲಾಗುವುದು. ಎಲ್ಲ ನಾಯಕರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಚರಂತಿಮಠರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular