HomeLatest Newsಉಪಚುನಾವಣಾ ಪ್ರಚಾರಕ್ಕೆ ಉಚ್ಚಟಿತ ಶಾಸಕ ಯತ್ನಾಳ್ ಬರುತ್ತಾರೆ: ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹೇಳಿಕೆ

ಉಪಚುನಾವಣಾ ಪ್ರಚಾರಕ್ಕೆ ಉಚ್ಚಟಿತ ಶಾಸಕ ಯತ್ನಾಳ್ ಬರುತ್ತಾರೆ: ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹೇಳಿಕೆ

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಈಗಾಗಲೇ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ಮಾರ್ಚ್ 23ರ ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಸೇರಿ ರಾಜ್ಯದ್ಯ ಪ್ರಮುಖ ನಾಯಕರು ಮತ್ತು ಮಾಜಿ ಮಂತ್ರಿಗಳು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಹಬ್ಬದಂತೆ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಯತ್ನಾಳ್​​ ಕೂಡ ವೈಯಕ್ತಿಕ ಸಂಬಂಧಗಳ ಆಧಾರದ ಮೇಲೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular