BREAKING: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ 15 ಸಾವಿರ ಮತಗಳಿಂದ ಮುನ್ನಡೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳ ಸ್ಪರ್ಧೆಯಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.

ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯ ನಡೆದಿದ್ದು, ನಂತರ EVM ಮತಗಳ ಎಣಿಕೆ ಆರಂಭವಾಗಿದೆ. ಆರಂಭಿಕ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗಿಂತ ಒಂದು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೀತಾ ಶಿವರಾಜ್ ಕುಮಾರ್ ಮುನ್ನಡೆ ಗಳಿಸಿದ್ದು, ಮತ ಎಣಿಕೆ ಮುಂದುವರೆಯುತ್ತಿದ್ದ ರಾಘವೇಂದ್ರ ಮುನ್ನಡೆ ಗಳಿಸಿದ್ದಾರೆ.

ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ 18,000 ಮತಗಳಿಂದ ಮುನ್ನಡೆ ಗಳಿಸಿದ್ದು, ಚಾಮರಾಜನಗರದಲ್ಲಿ ಸುನಿಲ್ ಬೊಸ್ 12 ಸಾವಿರಕ್ಕೂ ಅಧಿಕ ಮತಗಳ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎನ್. ಮಂಜುನಾಥ್ ಮುನ್ನಡೆ ಗಳಿಸಿದ್ದಾರೆ.

ಲೋಕಸಭಾ ಚುನಾವಣಾ ಮತ ಎಣಿಕೆ:

ಮೊದಲನೇ ಸುತ್ತು

ಬಿಜೆಪಿ-ಬಿ.ವೈ.ರಾಘವೇಂದ್ರ-33780

ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497

ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read