ಚಳಿಗಾಲದ ಅಧಿವೇಶನಕ್ಕೆ ಮುನ್ನ ವಿಜಯೇಂದ್ರ ವರಿಷ್ಠರ ಭೇಟಿ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ  ಚಳಿಗಾಲದ ಅಧಿವೇಶನ ಆರಂಭವಾಗುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯದಲ್ಲಿ ಪಕ್ಷ ಸಂಘಟನೆ ಕಾರ್ಯತಂತ್ರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವರಿಷ್ಠರಿಂದ ಮಾರ್ಗದರ್ಶನ ಪಡೆಯಲಿದ್ದಾರೆ. ಡಿ. 2, 3 ರಂದು ವಿಜಯೇಂದ್ರ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿಧಾನ ಪರಿಷತ್ viಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಒಂದೆರಡು ದಿನಗಳಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇರುವುದರಿಂದ ಪರಿಹಾರ ಧನ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read