HomeKarnatakaಹೈವೋಲ್ಟೇಜ್ ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಎಂಟ್ರಿ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್

ಹೈವೋಲ್ಟೇಜ್ ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಎಂಟ್ರಿ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್

ಮೈಸೂರು: ಹೈವೋಲ್ಟೇಜ್ ವರುಣಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಸ್ವಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಕೈಗೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅಲರ್ಟ್ ಆಗಿದ್ದು, ಇಂದು ವರುಣಾ ಕ್ಷೇತ್ರದಲ್ಲಿ ಇಡೀ ದಿನ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಡೀ ದಿನ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾದಲ್ಲಿ ಸುಲಭ ಗೆಲುವಿನ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ ಅವರ ಎದುರು ಸಚಿವ ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಹಿಡಿತ ಹೊಂದಿರುವ ವಿಜಯೇಂದ್ರ ಬಿರುಸಿನ ಪ್ರಚಾರ ನಡೆಸಿದ್ದರಿಂದ ಸಿದ್ದರಾಮಯ್ಯ ಕಾರ್ಯ ತಂತ್ರ ಬದಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular