HomeKarnatakaBIG NEWS: ಕಾಂಗ್ರೆಸ್ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: ಬೈ ಎಲೆಕ್ಷನ್ ಗೆದ್ದ ಅಮಲಿನಲ್ಲಿ ಈ ರೀತಿ...

BIG NEWS: ಕಾಂಗ್ರೆಸ್ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: ಬೈ ಎಲೆಕ್ಷನ್ ಗೆದ್ದ ಅಮಲಿನಲ್ಲಿ ಈ ರೀತಿ ಆದೇಶ ಹೊರಡಿಸಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಅಜ್ಯ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹುಚ್ಚು ಹಿಡಿದಿದೆ. ಸರ್ಕಾರದ ಪಾಪದ ಕೊಡ ತುಂಬಿದೆ. ಇವರ ಯೋಗ್ಯತೆಗೆ ಆಡಳಿತ ನಡೆಸಲು ಸಾಧ್ಯವಾಗದೇ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ರಾಅಜ್ಯದ ಜನರೇ ಮುಂದೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಲೆಗಳಲ್ಲಿ ಹಿಜಾಬ್ ಧರಿಸಲು ಅಧಿಕೃತ ಮುದ್ರೆ ಒತ್ತಿರುವುದು ಸರಿಯಲ್ಲ. ಮುಸ್ಲೀಂರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ. ಹಿಜಾಬ್ ವಿಚಾರ ಇನ್ನೂ ಕೋರ್ಟ್ ನಲ್ಲಿದೆ. ಅಲ್ಪಸಂಖ್ಯತರನ್ನು ಓಲೈಸಲು ಏನು ಮಾಡಲು ಕಾಂಗ್ರೆಸ್ಸಿಗರು ಹೇಸುವುದಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳಿಗೆ ನಿರಂತರ ಅಪಮಾನ ಮಾಡುತ್ತಿದೆ. ಸರ್ಕಾರದ ಈ ನಿರ್ಧಾರದಲ್ಲಿ ಪರಸ್ಪರ ಎತ್ತಿಕಟ್ಟುವ ಷಡ್ಯಂತ್ರವಿದೆ. ಬೈ ಎಲೆಕ್ಷನ್ ಗೆದ್ದ ಅಮಲಿನಲ್ಲಿ ಈ ರೀತಿ ಮಾಡುತ್ತಿದೆ. ಅಭಿವೃದ್ಧಿ ಮರೆತು ಹಿಂದೂಗಳಿಗೆ ಅಪಮಾನ ಮಾಡುತ್ತಾ, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular